SAST
|| Jai Sri Gurudev ||

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ

Sri Adichunchanagiri Mahasamsthana Math

ACM God

THE STORY OF A GURU ಪುಸ್ತಕ ಬಿಡುಗಡೆ ಮಾಡಿದ ಅಮಿತ್ ಶಾ

ದಿನಾಂಕ 13-08-2017, ಶ್ರೀ ಕ್ಷೇತ್ರ ಆದಿಚುಂಚನಗಿರಿ:
ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಏರ್ಪಡಿಸಲಾಗಿದ್ದ ಪರಮಪೂಜ್ಯ ಜಗದ್ಗುರು ಯುಗಯೋಗಿ ಪದ್ಮಭೂಷಣ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಸ್ವಾಮೀಜಿಗಳವರ ಆತ್ಮ ಚರಿತ್ರೆ ಪುಸ್ತಕ (THE STORY OF A GURU) ಬಿಡುಗಡೆಯ ಸಮಾರಂಭಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಅಮಿತ್ ಶಾ ರವರನ್ನು ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು. ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ವಹಿಸಿ ಕಾರ್ಯಕ್ರಮದ ಉದ್ಘಾಟನೆಯನ್ನು ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳು ನೆರವೇರಿಸಿ ಆಶೀರ್ವಚನ ನೀಡಿದರು. ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಶಾಖಾ ಮಠಗಳ ಸ್ವಾಮೀಜಿಗಳವರು, ಗಣ್ಯರು, ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದರು.