ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಅಮಾವಾಸ್ಯೆ ಪೂಜೆಯ ಪ್ರಯುಕ್ತ ಟಿ.ಬಿ. ಜಯಚಂದ್ರ ಮತ್ತು ಹೆಚ್.ಡಿ. ರೇವಣ್ಣ ದಂಪತಿಗಳ ಭೇಟಿ

21-08-2017, ಆದಿಚುಂಚನಗಿರಿ:
ಇಂದು ಬೆಳಗ್ಗೆ ಅಮಾವಾಸ್ಯೆಯ ಪ್ರಯುಕ್ತ ಶ್ರೀ ಕಾಲಭೈರವೇಶ್ವರಸ್ವಾಮಿ ದೇವಾಲಯದಲ್ಲಿ ಕರ್ನಾಟಕ ಸರ್ಕಾರದ ಕಾನೂನು ಸಚಿವರಾದ ಶ್ರೀ ಟಿ.ಬಿ. ಜಯಚಂದ್ರ ದಂಪತಿಗಳು ಮತ್ತು ಮಾಜಿ ಸಚಿವರಾದ ಶ್ರೀ ಹೆಚ್.ಡಿ. ರೇವಣ್ಣ ಹಾಗೂ ದಂಪತಿಗಳು ವಿಶೇಷ ಪೂಜೆ ಸಲ್ಲಿಸಿದರು.
ಶ್ರೀ ಕಾಲಭೈರವೇಶ್ವರಸ್ವಾಮಿಗೆ ಪಂಚಾಮೃತಾಭಿಷೇಕ, ಭಸ್ಮಾಭಿಷೇಕ, ಬಿಲ್ವಾಭಿಷೇಕ, ಪುಷ್ಪಾಭಿಷೇಕ, ಸುಗಂಧ ದ್ರವ್ಯಾದಿಗಳೊಂದಿಗೆ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ವಿಶೇಷ ಪೂಜೆಯನ್ನು ನೆರವೇರಿಸಿದರು. ನಂತರ ಶ್ರೀ ಕಾಲಭೈರವೇಶ್ವರಸ್ವಾಮಿ ದೇವಾಲಯದಲ್ಲಿ ಬೆಳ್ಳಿರಥೋತ್ಸವ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಈ ಪೂಜಾ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಶಾಖಾಮಠಗಳ ಪೂಜ್ಯ ಸ್ವಾಮೀಜಿಯವರುಗಳು ಉಪಸ್ಥಿತರಿದ್ದರು. ಸದ್ಭಕ್ತ ಮಹಾಶಯರು ಶ್ರೀ ಕಾಲಭೈರವೇಶ್ವರಸ್ವಾಮಿ ದರ್ಶನ ಪಡೆದು ಪುಣ್ಯಭಾಜರಾದರು. ಪರಮಪೂಜ್ಯರು ಬಂದ ಅತಿಥಿಗಳನ್ನು ಶಾಲು ಹೊದಿಸಿ ಆಶೀರ್ವದಿಸಿದರು.